HomeKarnataka Newsಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ: ಭಾಷಣದಲ್ಲಿ 'ಗ್ಯಾರಂಟಿ' ಹೊಗಳಿದ ಸಿದ್ದರಾಮಯ್ಯ!

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ: ಭಾಷಣದಲ್ಲಿ ‘ಗ್ಯಾರಂಟಿ’ ಹೊಗಳಿದ ಸಿದ್ದರಾಮಯ್ಯ!

For Dai;y Updates Join Our whatsapp Group

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ 8 ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಮೆರಗು ಪಡೆದುಕೊಂಡವು. ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್ ಎಫ್, ಗೋವಾ ಪೊಲೀಸ್ ತಂಡ ಸೇರಿ ವಿವಿಧ ಇಲಾಖೆಯ 35 ತುಕಡಿಗಳಲ್ಲಿ 1,150 ಮಂದಿಯಿಂದ ಪಥ ಸಂಚಲನ ಹಾಗೂ ಸರ್ಕಾರಿ ಮತ್ತು ಬಿಬಿಎಂಪಿಯ 1,150 ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಪೊಲೀಸ್ ಸಮೂಹ ವಾದ್ಯಮೇಳದ 253 ಅಧಿಕಾರಿ, ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿತು.

ಮೈದಾನ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ ಹೆಚ್ಚುವರಿ 100 ಸಿಸಿ ಕ್ಯಾಮೆರಾ ವ್ಯವಸ್ಥೆ, ಬ್ಯಾಗೇಜ್ ಸ್ಕ್ಯಾನರ್, ಕೆಎಸ್‌ಆರ್‌ಪಿ ಮತ್ತು ಸಿಆರ್‌ತುಕಡಿ, ಎರಡು ಅಗ್ನಿಶಾಮಕ ವಾಹನ, ಎರಡು ಆ್ಯಂಬುಲೆನ್ಸ್ ವಾಹನ, ಕ್ಷಿಪ್ರ ಕಾರ್ಯಾಚರಣೆ ಪಡೆ, ಬಾಂಬ್ ನಿಷ್ಕ್ರಿಯ ದಳ ತಂಡದ ನಿಯೋಜನೆ ಮಾಡಲಾಗಿತ್ತು.

ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ:

ಬಸವಣ್ಣನವರ ಧ್ಯೇಯದಂತೆ ನಮ್ಮ ಸರ್ಕಾರ ನಡೆಯುತ್ತಿದ್ದು, ನಮ್ಮ ಸರ್ಕಾರ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಕೊಂಡಾಡಿದ್ದಾರೆ. ಭಾಷಣದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಮರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. 5 ಗ್ಯಾರಂಟಿ ಗಳಿಂದ 96 ಸಾವಿರ ಕೋಟಿಗೂ ಹೆಚ್ಚು ಹಣವನ್ನೆ ನೀಡಿದ್ದೇವೆ. ಶಕ್ತಿಯೋಜನೆ ಮಹಿಳೆಯರಿಗೆ ಸಹಾಯಕವಾಗಿದೆ. ಯೋಜನೆಗಾಗಿ 5900 ಹೊಸ ಬಸ್ಸುಗಳನ್ನು ಖರೀದಿ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿಯಿಲ್ಲದೇ ತಲಾದಾಯ ಹೆಚ್ಚಾಗಿದೆ ಎಂದು ತಿಳಿಸಿದರು.

ತಲಾದಾಯದಲ್ಲಿ ಕರ್ನಾಟಕ ದೇಶದಲ್ಲೇ ಮೊದಲಿದೆ. ಕಳೆದ ಹತ್ತು ವರ್ಷಗಳಲ್ಲಿ ಶೇಕಡಾ 101 ರಷ್ಟು ಪ್ರಗತಿ ಸಾಧಿಸಿದೆ. 2013-14 ರಲ್ಲಿ ಸ್ಥಿರ ದರಗಳಲ್ಲಿ 1,01,858 ರೂಪಾಯಿಗಳಷ್ಟಿತ್ತು. ಈಗ 2024-25ರ ವೇಳೆಗೆ 2,04,605 ರೂಪಾಯಿ ತಲುಪಿದೆ ಎಂದು ಹೇಳಿದರು. ನುಡಿದಂತೆ ನಡೆಯಬೇಕೆಂಬ ಧ್ಯೇಯ ವಾಕ್ಯದ ಮೂಲಕ ನಮ್ಮ ಸರ್ಕಾರ ತನ್ನದೇ ಆದ ಅಭಿವೃದ್ಧಿ ಮಾದರಿಗಳನ್ನು ನಿರ್ಮಿಸಿದೆ. ಇದಕ್ಕೆ ಕರ್ನಾಟಕ ಅಭಿವೃದ್ಧಿ ಮಾದರಿ ಎಂಬ ಹೆಸರಿನಲ್ಲಿ ಮನ್ನಣೆ ದೊರೆತಿರುವುದು ಹೆಮ್ಮೆಯ ಸಂಗತಿ. ವಿಶ್ವಸಂಸ್ಥೆಯ ಮುಖ್ಯಸ್ಥರಾದ ಫಿಲೆಮನ್ ಯಾಂಗ್ ರವರು ಕರ್ನಾಟಕಕ್ಕೆ ಬಂದು, ನಮ್ಮ ಗ್ಯಾರಂಟಿ ಯೋಜನೆಗಳನ್ನ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಕೃಷಿ ವಲಯಕ್ಕೆ 2025-26ರ ಬಜೆಟ್ ನಲ್ಲಿ 51,339 ಕೋಟಿ ಒದಗಿಸಿದ್ದೇವೆ. 2022-23ಕ್ಕೆ ಹೋಲಿಸಿದರೆ ಶೇಕಡಾ 52.34 ರಷ್ಟು ಅನುದಾನವನ್ನು ಕೃಷಿಗೆ ಕೊಟ್ಟಿದ್ದೇವೆ. ನಮ್ಮ ಮೊದಲ ಆದ್ಯತೆ ಕೃಷಿ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!