ಇಂದಿನಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ: ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ.!

0
Spread the love

ಬೆಂಗಳೂರು: ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಸ್ವಾತಂತ್ರೋತ್ಸವ 218ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭಗೊಳ್ಳಲಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

Advertisement

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು 218ನೇ ವರ್ಷದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದಿದ್ದಾರೆ.

ಈ 218 ನೇ ವರ್ಷದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ. ಚೆನ್ನಮ್ಮನ ಮೊದಲನೇ ಯುದ್ಧಗಳಲ್ಲಿ ಬ್ರಿಟಿಷರ ವಿರುದ್ಧ ಜಯ ಸಿಕ್ತು. ಎರಡನೇ ಯುದ್ಧದಲ್ಲಿ ಚೆನ್ನಮ್ಮನ ಸೆರೆಯಾಯಿತು. ರಾಯಣ್ಣ, ಚೆನ್ನಮ್ಮನ ಬಲಗೈ ಬಂಟ. ರಾಯಣ್ಣನಿಗೆ ನ್ಯಾಯಾಲಯದಲ್ಲಿ ಗಲ್ಲು ಶಿಕ್ಷೆ ಆಯ್ತು.

ರಾಯಣ್ಣ ಹುಟ್ಟಿದ್ದು ಸ್ವಾತಂತ್ರ್ಯ ಬಂದ ದಿನ. ಗಲ್ಲು ಶಿಕ್ಷೆ ಆಗಿದ್ದು ಗಣರಾಜ್ಯ ದಿನ, ಇದು ಕಾಕತಾಳೀಯ ಅಂತಾನೇ ಎನ್ನಬಹುದು. ಬ್ರಿಟಿಷರ ವಿರುದ್ಧ ರಾಯಣ್ಣ ವೀರಾವೇಶದಿಂದ ಹೋರಾಡಿದ್ರು, ಇದೀಗ ತೋಟಗಾರಿಕೆ ಇಲಾಖೆಯಿಂದ ಗೌರವ ಸಲ್ಲಿಸಲಾಗುತ್ತಿದೆ. ಇವತ್ತು ಈ ವೀರರನ್ನ ಸ್ಮರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

 


Spread the love

LEAVE A REPLY

Please enter your comment!
Please enter your name here