ಆರೋಗ್ಯದಲ್ಲಿ ಏರುಪೇರು: ಹಿರಿಯ ನಟ ಸರಿಗಮ ವಿಜಯ್ ಆಸ್ಪತ್ರೆಗೆ ದಾಖಲು!

0
Spread the love

ಬೆಂಗಳೂರು:- ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಹಿರಿಯ ನಟ ಸರಿಗಮ ವಿಜಯ್ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಸರಿಗಮ ವಿಜಯ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಪುತ್ರ ರೋಹಿತ್ ಮಾಹಿತಿ ಹಂಚಿಕೊಂಡಿದ್ದಾರೆ.

ಅಂದಹಾಗೆ, 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here