ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಿ

0
video conf
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಮುಂಬರುವ ಲೋಕಸಭಾ ಚುನಾವಣೆ-೨೦೨೪ರ ಅಂಗವಾಗಿ ಕರ್ನಾಟಕ ಚುನಾವಣಾ ಆಯೋಗದಿಂದ ಫೆ.೨೩ರಂದು ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯ ಜವಾಬ್ದಾರಿ, ಕರ್ತವ್ಯಗಳ ಬಗ್ಗೆ ಜಿಲ್ಲಾ ಚುನಾವಣಾ ವಿಭಾಗದಲ್ಲಿ ವಿಡಿಯೋ ಸಂವಾದ ಜರುಗಿತು.

Advertisement

ವಿಡಿಯೋ ಸಂವಾದದಲ್ಲಿ ಮಾತನಾಡಿದ ಕರ್ನಾಟಕ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್‌ಕಮಾರ್ ಆರ್., ಚುನಾವಣೆಗಳಲ್ಲಿ ನೀತಿ ಸಂಹಿತೆ ಜಾರಿ ದಿನಾಂಕದಿಂದ ಮುಕ್ತಾಯದ ದಿನಾಂಕದವರೆಗೆ ಚುನಾವಣಾ ನಿಯೋಜಿತ ಸಮಿತಿ, ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅದರನ್ವಯ ಕಾರ್ಯನಿರ್ವಹಿಸಬೇಕು. ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ತಮ್ಮ ಪ್ರಚಾರದ ಮಾರ್ಗವಾಗಿ ದಿನಪತ್ರಿಕೆಗಳು, ಸುದ್ದಿವಾಹಿನಿಗಳು, ರೇಡಿಯೋ, ಎಫ್.ಎಂಗಳು, ಸಾಮಾಜಿಕ ಜಾಲತಾಣಗಳನ್ನು ಅವಲಂಬಿಸಿರುತ್ತವೆ. ಆದ್ದರಿಂದ ಇವುಗಳ ಮೇಲೆ ನಿಗಾ ಇಡಲು ಚುನಾವಣಾ ಆಯೋಗದಿಂದ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿ ವಾರ್ತಾಧಿಕಾರಿಗಳನ್ನು ಒಳಗೊಂಡು ಜಿಲ್ಲಾ ಚುನಾವಣಾಧಿಕಾರಿಗಳು ಸಮಿತಿಯನ್ನು ರಚಿಸಬೇಕು ಎಂದು ಅವರು ತಿಳಿಸಿದರು.

ಚುನಾವಣೆಗಾಗಿ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಪತ್ರಿಕೆಗಳು, ಸುದ್ದಿವಾಹಿನಿಗಳು ಮುಂತಾದ ಮಾಧ್ಯಮಗಳ ಮೂಲಕ ನೀಡುವ ಜಾಹೀರಾತುಗಳ ಮೇಲೆ, ಮಾಧ್ಯಮಗಳಲ್ಲಿ ಬರುವ ಸುದ್ದಿಗಳ ಮೇಲೆ ಸಮಿತಿಯು ನಿಗಾ ವಹಿಸಬೇಕು. ಪತ್ರಿಕೆಗಳಲ್ಲಿ ಪ್ರಕಟವಾಗುವ, ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ಸಂದರ್ಶನ, ಏಕ ವ್ಯಕ್ತಿ ಕೇಂದ್ರಿತ ಸುದ್ದಿಗಳ ಮೇಲೆ ನಿಗಾ ವಹಿಸಿ, ಪೇಯ್ಡ್ ಸುದ್ದಿಯ ಕುರಿತು ಎಚ್ಚರಿಕೆ ವಹಿಸಬೇಕು. ಪೇಯ್ಡ್ ಸುದ್ದಿ ಎಂದು ಸಮಿತಿಯು ನಿರ್ಧರಿಸಿದ ಮೇಲೆ ಆಯೋಗದ ಮಾರ್ಗಸೂಚಿಯನ್ವಯ ಮುಂದಿನ ಕ್ರಮ ಕೈಗೊಳ್ಳಬೇಕು.

ಜಾಹೀರಾತು ವೆಚ್ಚದ ಮಾಹಿತಿಯನ್ನು ಆರ್‌ಒ, ಎಕ್ಸ್ಪೆಂಡಿಚರ್ ಅಧಿಕಾರಿಗೆ ಪ್ರತಿ ದಿನ ನೀಡಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹೀರಾತು, ಸುದ್ದಿಗಳನ್ನು ಗುರುತಿಸಿ ವರದಿ ಮಾಡಬೇಕು ಎಂದು ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯ ಕಾರ್ಯಗಳು, ಜವಾಬ್ದಾರಿಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.

ವಿಡಿಯೋ ಸಂವಾದದ ಬಳಿಕ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ವೈಶಾಲಿ ಎಂ.ಎಲ್. ಅವರು ಮಾತನಾಡಿ, ಚುನಾವಣಾ ಅಕ್ರಮಗಳ ಬಗ್ಗೆ, ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಬಗ್ಗೆ ದಿನಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ವರದಿಗಳನ್ನು ಕ್ಷಣ ಕ್ಷಣಕ್ಕೆ ಎಂಸಿಎಂಸಿ ಸಮಿತಿಯು ವರದಿ ಮಾಡಬೇಕು. ಉಲ್ಲಂಘನೆ ಪ್ರಕರಣಗಳು ಹಾಗೂ ಚುನಾವಣಾ ಅಕ್ರಮಗಳ ವರದಿಗಳ ಮೇಲೆ ನಿರಂತರ ನಿಗಾವಹಿಸಬೇಕು. ಜಾಹೀರಾತುಗಳಿಗೆ ಅನುಮತಿಯನ್ನು ನೀಡುವಲ್ಲಿ ಹೆಚ್ಚಿನ ನಿಗಾವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ, ಅಧಿಕಾರಿಗಳಾದ ಮಾರುತಿ ಬ್ಯಾಕೋಡ, ಅಮಿತ ಬಿದರಿ, ರಾಜು ಹೆಬ್ಬಳ್ಳಿ ಉಪಸ್ಥಿತರಿದ್ದರು.

ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಟ್ವಿಟ್ಟರ್, ಯೂಟ್ಯೂಬ್, ವಾಟ್ಸಪ್ ಚಾನೆಲ್ ಸೇರಿದಂತೆ ಇತರೆ ವೇದಿಕೆಗಳನ್ನು ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇವುಗಳ ಮೇಲೆ ನಿಗಾವಹಿಸಲು ನುರಿತ ಅಧಿಕಾರಿಗಳನ್ನು ನಿಯೋಜಿಸಲಾಗುವದು. ಈ ಸಾಮಾಜಿಕ ಜಾಲತಾಣಗಲಳ ನಿಗಾ ಸಮಿತಿ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಬೇಕು. ಉಲ್ಲಂಘನೆ ಪ್ರಕರಣ ಕಂಡುಬAದಲ್ಲಿ ಕೂಡಲೇ ಸಮಿತಿಯ ಮುಖ್ಯಸ್ಥರಿಗೆ ವರದಿ ಮಾಡುವ ಮೂಲಕ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.


Spread the love

LEAVE A REPLY

Please enter your comment!
Please enter your name here