ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಇದೀಗ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ಜೈಲಾಧಿಕಾರಿಗಳು ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಿದ್ದು, ಸಂಜಯ್ ಗಾಂಧಿ ಆಸ್ಪತ್ರೆಯ ತಜ್ಞ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ.

ಕೋರ್ಟ್ ಸೂಚನೆಯಂತೆ ಜೈಲಾಧಿಕಾರಿಗಳು ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿ ಫಿಸಿಯೋಥೆರಪಿ ಚಿಕಿತ್ಸೆಗೆ ಮನವಿ ಮಾಡಿದ್ದರು. ಇದರಂತೆ ಆಸ್ಪತ್ರೆಯ ತಜ್ಞರು ಜೈಲಿಗೆ ಭೇಟಿ ನೀಡಿ ದರ್ಶನ್ಗೆ ಚಿಕಿತ್ಸೆ ನೀಡುತ್ತಿದ್ದಾರೆ. ಪ್ರತಿ ಎರಡು-ಮೂರು ದಿನಗಳಿಗೊಮ್ಮೆ ವೈದ್ಯರು ಜೈಲಿಗೆ ಆಗಮಿಸಿ ಫಿಸಿಯೋಥೆರಪಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಜೈಲಿನ ಬ್ಯಾರಕ್ನಲ್ಲೇ ಒಂದೂವರೆ ಗಂಟೆ ಚಿಕಿತ್ಸೆ!
ಫಿಸಿಯೋಥೆರಪಿಗೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳೊಂದಿಗೆ ಜೈಲಿಗೆ ಆಗಮಿಸುವ ತಜ್ಞ ವೈದ್ಯರು, ದರ್ಶನ್ ಇರುವ ಬ್ಯಾರಕ್ನಲ್ಲೇ ಚಿಕಿತ್ಸೆ ನೀಡುತ್ತಿದ್ದಾರೆ. ಸುಮಾರು ಒಂದೂವರೆ ಗಂಟೆಗಳ ಕಾಲ ವಿವಿಧ ಫಿಸಿಯೋಥೆರಪಿ ವಿಧಾನಗಳ ಮೂಲಕ ಚಿಕಿತ್ಸೆ ನೀಡಿ ವಾಪಸ್ ತೆರಳುತ್ತಿದ್ದಾರೆ ಎನ್ನಲಾಗಿದೆ.
ಬೆನ್ನು ನೋವಿನ ಸಮಸ್ಯೆಗೆ ಮತ್ತೆ ಚಿಕಿತ್ಸೆ
ಈ ಹಿಂದೆಯೂ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯರಿಂದಲೇ ದರ್ಶನ್ಗೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿತ್ತು. ಹಂತ ಹಂತವಾಗಿ ಚಿಕಿತ್ಸೆ ಪಡೆದ ಬಳಿಕ ಬೆನ್ನು ನೋವಿನ ಸಮಸ್ಯೆ ಕಡಿಮೆಯಾಗಿತ್ತು ಎನ್ನಲಾಗಿದೆ. ಇದೀಗ ಮತ್ತೆ ಚಿಕಿತ್ಸೆ ಆರಂಭವಾಗಿದ್ದು, ಬೆನ್ನು ನೋವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಿನಲ್ಲಿ, ಕೋರ್ಟ್ ಆದೇಶದಂತೆ ಜೈಲಿನಲ್ಲೇ ದರ್ಶನ್ಗೆ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದ್ದು, ವೈದ್ಯರು ನಿಯಮಿತವಾಗಿ ಭೇಟಿ ನೀಡಿ ಫಿಸಿಯೋಥೆರಪಿ ನೀಡಲಿದ್ದಾರೆ.







