ಕಾಲುಬಾಯಿ ರೋಗ ಲಸಿಕಾ ಅಭಿಯಾನ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಅವರ ನಿವಾಸದಲ್ಲಿ ಪಶುವೈದ್ಯಕೀಯ ಇಲಾಖೆ ವತಿಯಿಂದ ಜಾನುವಾರುಗಳಿಗೆ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಇದು ಜಾನುವಾರಗಳಿಗೆ ಹಲವಾರು ರೋಗಗಳಿಗೆ ಕಾರಣವಾಗಬಹುದಾಗಿದೆ. ಆದ್ದದರಿಂದ ಸರಕಾರ ಜಾನುವಾರುಗಳಿಗೆ ಕಾಲು-ಬಾಯಿ ಲಸಿಕೆ ಪ್ರಾರಂಭಿಸಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಅಧಿಕಾರಿಗಳು, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪುರಸಭೆಯ ಸದಸ್ಯರು, ಮುಖಂಡರು, ಪದಾಧಿಕಾರಿಗಳು, ರೈತ ಬಾಂಧವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here