HomeBengaluru Newsಬೆಂಗಳೂರಿನಲ್ಲಿ ಎರಡನೇ ದಿನವೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ವಿವಿಧೆಡೆ ಜೆಸಿಬಿ ಘರ್ಜನೆ

ಬೆಂಗಳೂರಿನಲ್ಲಿ ಎರಡನೇ ದಿನವೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ವಿವಿಧೆಡೆ ಜೆಸಿಬಿ ಘರ್ಜನೆ

For Dai;y Updates Join Our whatsapp Group

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ.

GBA ಅಧಿಕಾರಿಗಳು ಬೆಳಗ್ಗೆಯಿಂದಲೇ ನಗರದ ವಿವಿಧ ಭಾಗಗಳಲ್ಲಿ ಜೆಸಿಬಿ ಯಂತ್ರಗಳ ಮೂಲಕ ಒತ್ತುವರಿ ತೆರವುಗೊಳಿಸಿದರು.

ನಗರಾಭಿವೃದ್ಧಿ ಸಚಿವರ ಸೂಚನೆಯಂತೆ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಉತ್ತರ ವಲಯದ ಹಲವು ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿಕೊಂಡಿದ್ದ ಶೆಡ್‌ಗಳು, ತಾತ್ಕಾಲಿಕ ನಿರ್ಮಾಣಗಳು ಹಾಗೂ ಇತರೆ ಅಡೆತಡೆಗಳನ್ನು ತೆರವುಗೊಳಿಸಲಾಯಿತು.

ಸಹಕಾರನಗರ ಮುಖ್ಯರಸ್ತೆ, ಕೊಡಿಗೇನಹಳ್ಳಿ, ವಿದ್ಯಾರಣ್ಯಪುರ ಮುಖ್ಯರಸ್ತೆ, ನಂಜಪ್ಪ ಸರ್ಕಲ್, ಪುಲಿಕೇಶಿನಗರ, ದಿನ್ನೂರು ಮುಖ್ಯರಸ್ತೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಕಾಲೇಜು ಸಮೀಪದ ಫುಟ್‌ಪಾತ್‌ಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ನಿನ್ನೆ ಸರ್ಕಾರ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದ್ದು, ಇಂದು ಕೂಡ ನಗರದ ವಿವಿಧ ಪ್ರದೇಶಗಳಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಪಾದಚಾರಿಗಳಿಗೆ ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಫುಟ್‌ಪಾತ್‌ಗಳನ್ನು ಅತಿಕ್ರಮಣ ಮುಕ್ತಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img