ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ: ಸಂಸದ ಬೊಮ್ಮಾಯಿ

0
haveri
Spread the love

ನವದೆಹಲಿ: ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ.

Advertisement

ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ವಿಚಾರ ಇದೆ. ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ ಎಂದರು.

ಇನ್ನೂ ಈ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here