ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಂಡಳಿ ವತಿಯಿಂದ ರಾಜ್ಯಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ 2ನೇ ಹಂತದ 42,345 ಮನೆಗಳ ಲೋಕಾರ್ಪಣೆ ಕಾರ್ಯಕ್ರಮ ಜನವರಿ 24ರಂದು ನಡೆಯಲಿದೆ.
ಇಲ್ಲಿಯವರೆಗೆ ಒಟ್ಟು 3025 ಕೊಳಗೇರಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 2866 ಪ್ರದೇಶಗಳನ್ನು ಕೊಳಗೇರಿ ಪ್ರದೇಶವೆಂದು ಘೋಷಿಸಲಾಗಿದೆ. ಸದರಿ ಕೊಳಗೇರಿ ಪ್ರದೇಶಗಳಲ್ಲಿ ಮಂಡಳಿ ವತಿಯಿಂದ ಕೊಳಗೇರಿ ಸುಧಾರಣೆ ಯೋಜನೆಯಡಿ ಮೂಲಭೂತ ಸೌಲಭ್ಯ, ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಕೈಗೊಳ್ಳಲಾಗುತ್ತಿದೆ.
ಕೊಳಗೇರಿ ಪ್ರದೇಶಗಳಲ್ಲಿ ಕಚ್ಚಾ-ಗುಡಿಸಲುಗಳಲ್ಲಿ ವಾಸಿಸುತ್ತಿರುವ ನಿವಾಸಿಗಳನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಇನ್‌ಸಿಟು ಮಾದರಿಯಲ್ಲಿ ವಸತಿ ಕಲ್ಪಿಸಲಾಗುತ್ತಿದೆ ಮತ್ತು ವಾಸಕ್ಕೆ ಯೋಗ್ಯವಲ್ಲದ ಪ್ರದೇಶಗಳಾದ ರೈಲ್ವೆ ಹಳಿಗಳ ಪಕ್ಕ, ಹೈಟೆನ್ಶನ್ ವಿದ್ಯುತ್ ತಂತಿಗಳ ಕೆಳಗೆ, ಕೆರೆ ಅಂಗಳ, ರಾಜಕಾಲುವೆ ಪಕ್ಕ ಮುಂತಾದ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಿವಾಸಿಗಳನ್ನು ಮಂಡಳಿಯ ಕಾಯ್ದೆ 11ರಡಿಯಲ್ಲಿ ಘೋಷಿಸಿ ಸರ್ಕಾರದಿಂದ ಬದಲಿ ಜಮೀನನ್ನು ಪಡೆದು, ಸ್ಥಳಾಂತರಿಸಿ ರಿಲೊಕೇಷನ್ ಮಾದರಿಯಲ್ಲಿ ಪುನರ್ ವಸತಿ ಕಲ್ಪಿಸಿ ಕೊಳಗೇರಿ ಮುಕ್ತ ಮಾಡಲು ಕ್ರಮ ವಹಿಸುತ್ತಿದೆ. ರಾಜ್ಯಾದ್ಯಂತ ವಿವಿಧ ನಗರ, ಪಟ್ಟಣಗಳ ವ್ಯಾಪ್ತಿಯಲ್ಲಿ ಬರುವ ಆಯ್ಕೆ ಘೋಷಿತ ಕೊಳಗೇರಿ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಕೊಳಚೆ ಮುಕ್ತ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.
2015-16ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ರಾಜ್ಯ ಸರ್ಕಾರದ ವಸತಿ ಯೋಜನೆಗಳಾದ ಡಾ. ಅಂಬೇಡ್ಕರ್ ನಿವಾಸ್ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆಯ ಸಂಯೋಜನೆಯೊಡನೆ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯನुसार ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ರಾಜ್ಯಾದ್ಯಂತ ಬರುವ ನಗರ, ಪಟ್ಟಣಗಳಲ್ಲಿನ ಕೊಳಗೇರಿ ಪ್ರದೇಶಗಳಲ್ಲಿ ಮನೆಗಳ ಬೇಡಿಕೆ ಸಮೀಕ್ಷೆ ಕೈಗೊಂಡಿದ್ದು, ಒಟ್ಟು 4,92,256 ಕುಟುಂಬಗಳನ್ನು ಗುರುತಿಸಲಾಗಿದೆ.
ಈ ಪೈಕಿ 1,80,253 ಮನೆಗಳ ನಿರ್ಮಾಣ ಮಂಜೂರಾತಿ ನೀಡಿರುವ ಒಟ್ಟಾರೆ ಯೋಜನೆಯ ಮಾರ್ಗಸೂಚಿಯನुसार ಮಂಜೂರಾದ ಮನೆಗಳ ಘಟಕ ವೆಚ್ಚ ಸರಾಸರಿ ರೂ.7.52 ಲಕ್ಷಗಳಾಗಿದ್ದು, ಕೇಂದ್ರ ಸರ್ಕಾರದ ರೂ.1.50 ಲಕ್ಷಗಳು ಮತ್ತು ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಕ್ಕೆ ರೂ.2 ಲಕ್ಷಗಳು ಹಾಗೂ ಇತರೇ ವರ್ಗಕ್ಕೆ ರೂ.1.20 ಲಕ್ಷಗಳು ಮತ್ತು ಫಲಾನುಭವಿಗಳ ವಂತಿಕೆ ಮೊತ್ತವನ್ನು ಫಲಾನುಭವಿಗಳೇ ಸ್ವತಃ ಭರಿಸುವುದು ಅಥವಾ ಬ್ಯಾಂಕ್‌ಗಳಿಂದ ಫಲಾನುಭವಿಗಳ ಹೆಸರಿನಲ್ಲಿ ಸಾಲಸೌಲಭ್ಯ ಪಡೆದು ನಿರ್ಮಾಣವನ್ನು ಪೂರ್ಣಗೊಳಿಸಬೇಕಾಗಿತ್ತು.
ಈ ಪೈಕಿ ಫಲಾನುಭವಿಗಳ ವಂತಿಕೆಗೆ ಎದುರಾಗಿ ರೂ.960.75 ಕೋಟಿಗಳನ್ನು ಮತ್ತು ಮೂಲಭೂತ ಸೌಲಭ್ಯ ಒದಗಿಸಲು ರೂ.174.64 ಕೋಟಿಗಳನ್ನು ಸರ್ಕಾರದಿಂದ ಬಿಡುಗಡೆಗೊಳಿಸಲಾಗಿದೆ. ಬಿಡುಗಡೆಗೊಳಿಸಲಾದ ಕೇಂದ್ರ, ರಾಜ್ಯ ಮತ್ತು ಫಲಾನುಭವಿ ವಂತಿಕೆಗಾಗಿ ರಾಜ್ಯ ಸರ್ಕಾರದಿಂದ ಅನುದಾನ ಹಾಗೂ ಫಲಾನುಭವಿಗಳಿಂದ ಸಂಗ್ರಹಿಸಲಾದ ಮೊತ್ತವನ್ನು ಬಳಸಿಕೊಂಡು ಈ ಯೋಜನೆಯಡಿ ಒಟ್ಟು 86,651 ಮನೆಗಳನ್ನು ಪೂರ್ಣಗೊಳಿಸಲಾಗಿದ್ದು, ಈ ಪೈಕಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 42,190 ಮನೆಗಳು ಮತ್ತು ಇತರೆ ವರ್ಗದ 44,461 ಮನೆಗಳನ್ನು ಪೂರ್ಣಗೊಳಿಸಲಾಗಿದೆ.
ಯೋಜನೆಯಡಿ ಪೂರ್ಣಗೊಂಡಿರುವ ಮನೆಗಳ ಪೈಕಿ 36,789 ಮನೆಗಳನ್ನು ಪ್ರಥಮ ಹಂತದಲ್ಲಿ ಮುಖ್ಯಮಂತ್ರಿಯವರಿಂದ ಮಾರ್ಚ್-2024ರಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಪ್ರಸ್ತುತ 42,345 ಮನೆಗಳನ್ನು 2ನೇ ಹಂತದಲ್ಲಿ ಲೋಕಾರ್ಪಣೆ ಮಾಡಲಾಗುತ್ತಿದೆ.



