ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್!

0
Spread the love

ಬೆಂಗಳೂರು:- ಕರ್ನಾಟಕ ಹೈಕೋರ್ಟ್​​ ಇದೇ ಮೊದಲ ಬಾರಿಗೆ ಪ್ರಕಣವೊಂದರ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದೆ.

Advertisement

ಡಿಸೆಂಬರ್ 11 ರಂದು ಭಾರತ ಭಾಷಾ ದಿವಸದ ಪ್ರಯುಕ್ತ ಸಾಂಕೇತಿಕವಾಗಿ ಇಂದು ನ್ಯಾ. ಕೃಷ್ಣ ಎಸ್.ದೀಕ್ಷಿತ್, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ, ನಂಜಾವಧೂತ ಸ್ವಾಮಿ ವಿರುದ್ಧ ಎಸ್.ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲೇ ತೀರ್ಪು ನೀಡಿದೆ.

ಕನ್ನಡ ಅವಸಾನವಾಗಬಾರದೆಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳು ಕನ್ನಡದಲ್ಲೇ ವ್ಯವಹರಿಸುವಂತಾಗಬೇಕು. ಇಂಗ್ಲೆಂಡ್​ನಲ್ಲಿ 1730ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಯುತ್ತಿತ್ತು. 1730ರಿಂದ ಅವರ ಸ್ವಭಾಷೆ ಇಂಗ್ಲಿಸ್​ನಲ್ಲೇ ಕಲಾಪ ಆರಂಭಿಸಿದ್ದರು.

ಆದ್ರೆ, ಜನಸಾಮಾನ್ಯರಿಗೆ ಕೋರ್ಟ್​ಗಳ ತೀರ್ಪು ಏನಿದೆ ಎಂದು ತಿಳವ್ಯವಹರಿಸುವಂತಾಗಬೇಕು ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೈರ್ತಿ ಸಿ.ಎಂ.ಜೋಶಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.


Spread the love

LEAVE A REPLY

Please enter your comment!
Please enter your name here