ಬೆಂಗಳೂರು: ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿ ವೇಳೆ ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ ಎಂದು ಇಡಿ ತಿಳಿಸಿದೆ.
ದಾಳಿ ವೇಳೆ ದಾಖಲೆಗಳಿಲ್ಲದ ₹15 ಲಕ್ಷ ಮೌಲ್ಯದ ವಿದೇಶಿ ಹಣ ಪತ್ತೆಯಾಗಿದ್ದು, ಅದನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದ ವಿದೇಶಿ ಕರೆನ್ಸಿಯ ಫೋಟೋವನ್ನು ಇಡಿ ಬಿಡುಗಡೆ ಮಾಡಿದೆ.
ಇಡಿ ಮಾಹಿತಿ ಪ್ರಕಾರ, ಒಟ್ಟು 5 ದೇಶಗಳ ಕರೆನ್ಸಿ ಪತ್ತೆಯಾಗಿದೆ. ಅಮೆರಿಕನ್ ಡಾಲರ್, ಮಲೇಷಿಯನ್ ರಿಂಗೆಟ್, ಚೀನೀ ಯುವಾನ್, ಯುರೋ ಹಾಗೂ ದುಬೈನ ದಿರಹಂ ಕರೆನ್ಸಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ಈ ವೇಳೆ ವಿದೇಶಿ ಕರೆನ್ಸಿ ಪತ್ತೆಯಾಗಿರುವುದು ಪ್ರಕರಣದ ತನಿಖೆಯಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ.



