ಮೈಸೂರು:- ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ರೈತನ ಬಲಿ ಪಡೆದಿದ್ದ ಹುಲಿಯನ್ನು ಸೆರೆಹಿಡಿಯಲಾಗಿದೆ.
Advertisement
ಸರಗೂರು ತಾಲೂಕಿನ ಮುಳ್ಳೂರು ಬಳಿ ಅರವಳಿಕೆ ನೀಡಿ ಸಾಕಾನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸೆರೆಹಿಡಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ. ಸದ್ಯ ಹುಲಿ ಸೆರೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಘಟನೆ ವಿವರ:
ದನ ಮೇಯಿಸಲು ಹೋಗಿದ್ದ ವೇಳೆ ರೈತ ಹುಲಿ ದಾಳಿಗೆ ಬಲಿಯಾದ ಘಟನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿತ್ತು. ರಾಜಶೇಖರ (58) ಮೃತ ರೈತ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.


