HomeChamarajanagarಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯ ಬಲಿ: 10 ಎಕರೆ ಕಾಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯ ಬಲಿ: 10 ಎಕರೆ ಕಾಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

For Dai;y Updates Join Our whatsapp Group

ಚಾಮರಾಜನಗರ: ಎನ್‌ಕೌಂಟರ್ ಘಟನೆ ನಂತರ ಚಾಮರಾಜನಗರದ ಅರಣ್ಯ ಪ್ರದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಅರಣ್ಯ ಇಲಾಖೆಗೆ ಸವಾಲೆಸೆದಿದ್ದಾರೆ. ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಸುಮಾರು 10 ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಅರಣ್ಯಕ್ಕೆ ಬೆಂಕಿ ಹಚ್ಚಿದ ಪರಿಣಾಮ ಅಪಾರ ಪ್ರಮಾಣದ ಸಸ್ಯಸಂಪತ್ತು ಸುಟ್ಟುಹೋಗಿದೆ. ಬೆಂಕಿ ವ್ಯಾಪಿಸುತ್ತಿರುವುದನ್ನು ಗಮನಿಸಿದ ಅರಣ್ಯ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ಆರಂಭಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪ್ರಕರಣದ ಹಿಂದೆ ಉದ್ದೇಶಪೂರ್ವಕ ಕೃತ್ಯದ ಶಂಕೆ ವ್ಯಕ್ತವಾಗಿದ್ದು, ದುಷ್ಕರ್ಮಿಗಳಿಗಾಗಿ ಅರಣ್ಯ ಇಲಾಖೆ ಶೋಧ ಕಾರ್ಯ ಆರಂಭಿಸಿದೆ.

ಇದಕ್ಕೂ ಮುನ್ನ ಕಾವೇರಿ ವನ್ಯಜೀವಿಧಾಮದ ಕಳ್ಳಬೇಟೆ ತಡೆ ಶಿಬಿರಗಳನ್ನೇ ದುಷ್ಕರ್ಮಿಗಳು ಗುರಿಯಾಗಿಸಿಕೊಂಡಿದ್ದರು. ಜಿಲೆಟಿನ್ ಕಡ್ಡಿಗಳನ್ನು ಬಳಸಿ ನಾಲ್ಕು ಎಪಿಸಿ ಕ್ಯಾಂಪ್‌ಗಳನ್ನು ಸ್ಫೋಟಿಸಿ ಧ್ವಂಸಗೊಳಿಸಿದ ಘಟನೆ ಅರಣ್ಯ ಇಲಾಖೆಗೆ ದೊಡ್ಡ ಸವಾಲಾಗಿತ್ತು.

ಇದೀಗ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಅರಣ್ಯಕ್ಕೆ ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದ್ದು, ಸರಣಿ ಕೃತ್ಯಗಳ ಹಿಂದೆ ಒಂದೇ ಗುಂಪಿನ ಕೈವಾಡವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಮೂವರು ಬೇಟೆಗಾರರ ಎನ್‌ಕೌಂಟರ್ ಬಳಿಕ ಅರಣ್ಯ ಪ್ರದೇಶದಲ್ಲಿ ದುಷ್ಕರ್ಮಿಗಳ ಚಟುವಟಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿಯ ಭದ್ರತೆಯ ಬಗ್ಗೆಯೂ ಆತಂಕ ವ್ಯಕ್ತವಾಗಿದೆ. ಸಿಬ್ಬಂದಿ ನಿರಂತರ ನಿಗಾ ವಹಿಸುತ್ತಿದ್ದು, ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img