ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ!

0
Spread the love

ಚಿಕ್ಕಮಗಳೂರು:- ಚಾರ್ಮಾಡಿ ಘಾಟ್ ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು ಸಂಭವಿಸಿ ನೂರಾರು ಎಕರೆ ಅರಣ್ಯ ನಾಶವಾಗಿರುವ ಘಟನೆ ತಡರಾತ್ರಿ ಜರುಗಿದೆ.

Advertisement

ಇಲ್ಲಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿದಿರುತಳ ಅರಣ್ಯದಲ್ಲಿ ಈ ಅವಘಡ ಸಂಭವಿಸಿದೆ. ಕಾಡ್ಗಿಚ್ಚಿಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಇನ್ನು ಬೆಂಕಿ ಹೆಚ್ಚಾಗುತ್ತಿದ್ದಂತೆ ಪ್ರಾಣಿ ಸಂಕುಲ ದಿಕ್ಕೆಟ್ಟು ಓಡಿದೆ.

ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಹರಸಾಹಸಪಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here