HomeKarnataka Newsಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು ಪ್ರಕರಣದ ತನಿಖೆಗೆ ಅರಣ್ಯ ಸಚಿವರ ಸೂಚನೆ!

ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು ಪ್ರಕರಣದ ತನಿಖೆಗೆ ಅರಣ್ಯ ಸಚಿವರ ಸೂಚನೆ!

For Dai;y Updates Join Our whatsapp Group

Spread the love

ಬೆಂಗಳೂರು:- ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಸೂಕ್ತ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆ ನಡೆಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ್ದಾರೆ. ಕಾನೂನಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಕೂಡಲೇ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕ್ರಮ ವಹಿಸುವಂತೆ ಸೂಚಿಸಿದ್ದಾರೆ ಹಾಗೂ 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!