ಬೆಂಗಳೂರು: ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ ರಚಿಸುವಂತೆ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.̤
Advertisement
ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾ ಒಕ್ಕಲಿಗ ಸಚಿವರು, ಶಾಸಕರ ನಿಯೋಗ ಮನವಿ ಸಲ್ಲಿಸಿದೆ. ಸಚಿವ ಚಲುವರಾಯಸ್ವಾಮಿ ಸಚಿವ ಕೃಷ್ಣಬೈರೇಗೌಡ, ಸಚಿವ ಸುಧಾಕರ್, ಶಾಸಕ ಶರತ್ ಬಚ್ಚೇಗೌಡ, ಕುಣಿಗಲ್ ರಂಗನಾಥ್ ಸೇರಿ ಹಲವರು ನಿಯೋಗದಲ್ಲಿ ಇದ್ದರು.
ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯಕ್ಕೆ ನಿಂದನೆ, ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮತ್ತು ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ ಮಾಡಿರುವ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ.