ರಾಮನಗರ: ಕೋವಿಡ್ ಹಗರಣ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೇ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಈ ಭಜನೆ ಒಂದುವರೆ ವರ್ಷದಿಂದ ನಡೆಯುತ್ತಿದೆ. ಇವರುಗಳು ವಿರೋಧ ಪಕ್ಷದಲ್ಲಿ ಕೆಲಸ ಮಾಡುವಾಗ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದರು. ಪಿಎಸಿಎಲ್ ಚೇರ್ಮನ್ ಅವರ ಪಕ್ಷದವರೇ ಇದ್ದಾರೆ.
ಇಲ್ಲಿಯವರೆಗೆ ಯಾವುದೇ ರೀತಿಯ ತನಿಖೆ ಮಾಡಿಲ್ಲ. ಈಗ ಏಕೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ನಿಮಗೆ ನಿಜಕ್ಕೂ ರಾಜ್ಯದ ತೆರಿಗೆ ಹಣ ಲೂಟಿ ಬಗ್ಗೆ ಮಾಹಿತಿ ಇದ್ದರೆ ಯಾವಾಗಲೋ ತನಿಖೆ ಆಗಬೇಕಿತ್ತು. ಈಗ ನಿಮ್ಮ ಪರಿಸ್ಥಿತಿಗಳ ರಕ್ಷಣೆ ಪಡೆಯಲು ಈ ರೀತಿಯ ಬೆಳವಣಿಗೆ ಪ್ರಾರಂಭ ಮಾಡಿದ್ದೀರಿ. ಇದು ಯಾವುದೇ ರೀತಿಯಲ್ಲಿ ಫಲ ನೀಡಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.



