ಢಾಕಾ:- ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರು ಇಂದು ನಿಧನರಾಗಿದ್ದಾರೆ.
ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಬೇಗಂ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸುತ್ತಾರೆ ಎಂದು ಭಾವಿಸಲಾಗಿತ್ತು. ದುರದೃಷ್ಟವಶಾತ್ ಅವರು ನಿಧನ ಹೊಂದಿದ್ದಾರೆ.
ಖಲೀದಾ ಜಿಯಾ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ‘ಮಾಜಿ ಪ್ರಧಾನಿ ಮತ್ತು ಬಿಎನ್ಪಿ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಕುಟುಂಬ ಮತ್ತು ಬಾಂಗ್ಲಾದೇಶದ ಎಲ್ಲಾ ಜನರಿಗೆ ಭಗವಂತ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. 2015 ರಲ್ಲಿ ಢಾಕಾದಲ್ಲಿ ಅವರೊಂದಿಗಿನ ನನ್ನ ಆತ್ಮೀಯ ಭೇಟಿಯನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರ ದೂರದೃಷ್ಟಿ ಮತ್ತು ಪರಂಪರೆ ಉಭಯ ದೇಶಗಳಿಗೆ ಮಾರ್ಗದರ್ಶನವಾಗಿದೆ ಎಂದು ನಾವು ಭಾವಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದಿದ್ದಾರೆ.



