ಉಡುಪಿ: ಬೈಂದೂರು ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ (85) ನಿಧನ ಹೊಂದಿದ್ದಾರೆ. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.
Advertisement
ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ