HomeIndia Newsಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ!

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ!

For Dai;y Updates Join Our whatsapp Group

ನವದೆಹಲಿ: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹವನ್ನು ಡಿಎನ್ ಪರೀಕ್ಷೆ ಮೂಲಕ ಗುರುತಿಸಲಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜ್ಕೋಟ್​​ನಲ್ಲಿ ನೆರವೇರಲಿದೆ. ಸಿವಿಲ್ಆಸ್ಪತ್ರೆಯಲ್ಲಿ ಇಂದು ರೂಪಾನಿ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ನೀಡಲಾಗುತ್ತದೆ.

ಬಳಿಕ ವಿಮಾನದ ಮೂಲಕ ರಾಜ್ಕೋಟ್ಗೆ ಮಧ್ಯಾಹ್ನ ಸುಮಾರು 2 ಗಂಟೆಗೆ ತರಲಾಗುತ್ತದೆ. ಸಂಜೆ 5ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಹಮದಾಬಾದ್ ಸಿವಿಲ್ಆಸ್ಪತ್ರೆಯಲ್ಲಿರುವ ಅವರ ಪಾರ್ಥಿವ ಶರೀರವನ್ನು ಹೊತ್ತೊಯ್ಯುವ ವಾಹನಕ್ಕೆ 2,000 ಕೆ.ಜಿ ಹೂವುಗಳಿಂದ ಅಲಂಕಾರ ಮಾಡಲಾಗಿದ್ದು,

ಮೃತದೇಹದ ಮೇಲೆ ತ್ರಿವರ್ಣ ಧ್ವಜ ಹೊದಿಸಲಾಗುತ್ತದೆ. ಇದುವರೆಗೆ 80 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇದುವರೆಗೆ 33 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಸಿವಿಲ್ಆಸ್ಪತ್ರೆಯ ಹೆಚ್ಚುವರಿ ಸೂಪರಿಂಟೆಂಡೆಂಟ್ಡಾ.ರಜನೀಶ್ಪಟೇಲ್ ಹೇಳಿದ್ದಾರೆ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img