ಮಾಜಿ ಕ್ರಿಕೆಟಿಗ ಗಂಗೂಲಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು!

0
Spread the love

ಕೋಲ್ಕತ್ತಾ:- ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ದುರಂತ ಸಂಭವಿಸಿಲ್ಲ.

Advertisement

ಗಂಗೂಲಿ ಬರ್ಧಮಾನ್‌ಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಗೂಲಿ ಅವರ ರೇಂಜ್ ರೋವರ್ ಕಾರು ಸಾಮಾನ್ಯ ವೇಗದಲ್ಲಿ ಚಲಿಸುತ್ತಿತ್ತು. ಈ ವೇಳೆ ಲಾರಿಯೊಂದು ಇದ್ದಕ್ಕಿದ್ದಂತೆ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಈ ಸಂದರ್ಭದಲ್ಲಿ ಗಂಗೂಲಿ ಅವರ ಕಾರು ಚಾಲಕ ದಿಢೀರ್‌ ಬ್ರೇಕ್‌ ಹಾಕಿದ್ದಾನೆ. ಇದರಿಂದಾಗಿ ಗಂಗೂಲಿ ಅವರ ಕಾರಿನ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಒಂದು ಬೆಂಗಾವಲು ವಾಹನ ಗಂಗೂಲಿ ಅವರ ಕಾರಿಗೆ ಡಿಕ್ಕಿಯಾಗಿದೆ.

ಅದೃಷ್ಟವಶಾತ್ ವಾಹನಗಳು ಹೆಚ್ಚಿನ ವೇಗದಲ್ಲಿ ಚಲಿಸದ ಕಾರಣ ಗಂಗೂಲಿ ಪ್ರಾಣಾಪಾಯದಿಂದ ಪಾರಾಗಿದ್ದು ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.


Spread the love

LEAVE A REPLY

Please enter your comment!
Please enter your name here