ಬೆಂಗಳೂರು:- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ತಾಯಿ ವಿಧಿವಶರಾಗಿದ್ದಾರೆ.
Advertisement
  
92 ವರ್ಷದ ಸುಶೀಲಮ್ಮ ಮೃತ ದುರ್ದೈವಿ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಸುರೇಶ್ ಮಾಹಿತಿ ನೀಡಿದ್ದಾರೆ. ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು ಎಂದು ಬರೆದಿದ್ದಾರೆ.
ಶಿಕ್ಷಕಿಯಾಗಿದ್ದ ಸುಶೀಲಮ್ಮ ಅವರು ನಿವೃತ್ತಿ ಬಳಿಕ ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ನ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಒಟ್ಟು 8 ಬಾರಿ ನಿರ್ದೇಶಕರಾಗಿ ಆಯ್ಕೆ ಯಾಗಿದ್ದರು ಎನ್ನಲಾಗಿದೆ.


