ಹಾಸನ: ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ನಡೆದಿದೆ.
ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.



