ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಮಾಜಿ ಸಚಿವ ಬಿ ನಾಗೇಂದ್ರಗೆ ಜಾರಿ ನಿರ್ದೇಶನಾಲಯ ಮತ್ತೆ ಶಾಕ್ ನೀಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ ಅವರ ಸುಮಾರು 8.07 ಕೋಟಿ ರೂ. ಮೌಲ್ಯದ ವಸತಿ ಹಾಗೂ ವಾಣಿಜ್ಯ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
ನಿಗಮದ ಖಾತೆಗಳಿಂದ ಹಣವನ್ನು ನಕಲಿ ಖಾತೆಗಳು ಹಾಗೂ ಶೆಲ್ ಕಂಪನಿಗಳ ಮೂಲಕ ವರ್ಗಾಯಿಸಲಾಗಿದೆ ಎಂಬ ಆರೋಪದ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.



