ಬೆಂಗಳೂರು: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಹಗರಣದ ಆರೋಪಿ ಸತ್ಯನಾರಾಯಣ ವರ್ಮನನ್ನು ಬಾಡಿವಾರೆಂಟ್ ಮೇಲೆ ನಮಗೆ ನೀಡಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಹಗರಣ ಸಂಬಂಧ ಸತ್ಯನಾರಾಯಣ ವರ್ಮನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು, ಸದ್ಯ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ.
ವಾಲ್ಮೀಕಿ ನಿಗಮದ ಹಗರಣ ಇದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಒಳಗೊಂಡ ಮಹತ್ವದ ಹಣಕಾಸು ವಂಚನೆ ಪ್ರಕರಣವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಅವರ ಆತ್ಮಹತ್ಯೆಯ ನಂತರ ಹಗರಣವು ಬೆಳಕಿಗೆ ಬಂದಿದೆ



