ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ಇಂದು ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಬೆಳಗ್ಗಿನ ಜಾವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದು, ಪುತ್ರ ಶಾಸಕ ಹೆಚ್.ವಿ ವೆಂಕಟೇಶ್, ಕುಮಾರಸ್ವಾಮಿ, ಪುತ್ರಿ ಪದ್ಮಾವತಿ ಅವರನ್ನ ಅಗಲಿದ್ದಾರೆ.
ವೆಂಕಟರಮಣಪ್ಪ ಅವರು 2008ರಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018ರಲ್ಲಿ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಮೃತರ ಪಾರ್ಥೀವ ಶರೀರವನ್ನು ತುಮಕೂರಿನ ಗುರುಭವನದಲ್ಲಿ ಮಧ್ಯಾಹ್ನ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



