ಮಾಜಿ ಶಾಸಕ ಎ.ಎಸ್ ಬಸವರಾಜು ವಿಧಿವಶ!

0
Spread the love

ಹಾಸನ:- ಮಾಜಿ ಶಾಸಕ ಎ.ಎಸ್ ಬಸವರಾಜು ವಿಧಿವಶರಾಗಿದ್ದಾರೆ.

Advertisement

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ನಿಧರಾಗಿದ್ದಾರೆ.

2004-2007 ರವರೆಗೆ ಬಿಜೆಪಿಯಿಂದ (BJP) ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಕಾಂಗ್ರೆಸ್‍ನ ಜಿ.ವಿ.ಸಿದ್ದಪ್ಪ ಅವರ ವಿರುದ್ಧ ಸೋಲು ಕಂಡಿದ್ದರು. ಇನ್ನೂ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು ಎನ್ನಲಾಗಿದೆ.

ಮೃತರ ನಿಧನಕ್ಕೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here