ಬೆಂಗಳೂರು:- ಅನಾರೋಗ್ಯದಿಂದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ವಿಧಿವಶರಾಗಿದ್ದಾರೆ. ವೆಂಕಟರೆಡ್ಡಿ ಮುದ್ನಾಳ ಅವರನ್ನು ಬೆಂಗಳೂರಿನ ಹೆಚ್ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವೆಂಕಟರೆಡ್ಡಿ ಮುದ್ನಾಳ್ ವಿಧಿವಶರಾಗಿದ್ದಾರೆ.
2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಮುದ್ನಾಳವರು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಬಿಜೆಪಿಯಿಂದ ಸ್ಪರ್ಧೆ ಮಾಡಿ ಪರಭಾವಗೊಂಡಿದ್ದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ ವೆಂಕಟರೆಡ್ಡಿ ಮುದ್ನಾಳ ಯಾದಗಿರಿಯ ಪುರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮುದ್ನಾಳ, ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರೂ ಕೂಡ ಆಗಿದ್ದವರು. ಸದ್ಯ ಹೆಚ್ಸಿಜಿ ಆಸ್ಪತ್ರೆಯಲ್ಲಿ ಅಸುನೀಗಿರುವ ಮುದ್ನಾಳವರ ಪಾರ್ಥಿವ ಶರೀರವನ್ನು ಇಂದು ರಾತ್ರಿ ಯಾದಗಿರಿಗೆ ತೆಗೆದುಕೊಂಡು ಹೋಗಲಿದ್ದಾರೆ.


