ಚಿಕ್ಕೋಡಿ:- ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಪ್ಪಾಣಿಯ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ಅವರು ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಸಾಕಷ್ಟು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಕಾಸಾಹೇಬ್ ಪಾಟೀಲ್, ಚಿಕಿತ್ಸೆ ಫಲಿಸದೇ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬೆಂಬಲಿಗರನ್ನು ಕಾಕಾಸಾಹೇಬ್ ಪಾಟೀಲ್ ಅಗಲಿದ್ದು, ನಿಪ್ಪಾಣಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಲಿದೆ. ಅಂತ್ಯಕ್ರಿಯೆಯಲ್ಲಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
1999ರಿಂದ 2013 ರವರೆಗೆ ಸತತ ಮೂರು ಬಾರಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನ ಸಭಾ ಕ್ಷೇತ್ರದಿಂದ ಕಾಕಾಸಾಹೇಬ್ ಪಾಟೀಲ್ ಶಾಸಕರಾಗಿದ್ದರು.



