ನವದೆಹಲಿ:- ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ.
Advertisement
ಅನಾರೋಗ್ಯದ ಹಿನ್ನೆಲೆ ಮನಮೋಹನ್ ಸಿಂಗ್ ಅವರನ್ನು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು ಎನ್ನಲಾಗಿದೆ.