ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನ: ಮಾಜಿ ಪ್ರಧಾನಿ HD ದೇವೇಗೌಡರು ವಿರೋಧ!?

0
Spread the love

ರಾಮನಗರ:- ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುತ್ತಿರುವುದಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಹಿರಿಯ ನಾಯಕ HD ದೇವೇಗೌಡರು ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ದೇವೇಗೌಡ ಅವರು ಪತ್ರದ ಮೂಲಕ ಭೂಸ್ವಾಧೀನ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಏನಿದೆ!?

ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿನ ಹಲವಾರು ಸರ್ವೆ ನಂಬರ್‌ಗಳಲ್ಲಿರುವ ಸುಮಾರು 10,000 ಎಕ್ರೆ ಜಮೀನನ್ನು ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ಯೋಜನೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ವರದಿಯಾಗಿದೆ.

ಜಿಲ್ಲೆಯ ರಾಮನಗರ ಮತ್ತು ಕನಕಪುರ ತಾಲೂಕಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಸಾವಿರಾರು ಎಕರೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕಾಭಿವೃದ್ಧಿ ಪ್ರದೇಶವನ್ನಾಗಿ ಸ್ಥಾಪಿಸಿದೆ. ಜಿಲ್ಲೆಯು ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಂತೆ ಇದ್ದು, ಇಲ್ಲಿ ಹವವಾರು ಉದ್ಯಮಿಗಳು ಖಾಸಗಿಯಾಗಿ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ.

ಉಳಿದಂತೆ ಇರುವ ಕೃಷಿ ಭೂಮಿಯಲ್ಲಿ ರೈತರು ತಮ್ಮ ಜೀವನ ನಿರ್ವಹಣೆಗೆ ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ, ಕೃಷಿ ಅವಲಂಬಿತರಾಗಿದ್ದಾರೆ. ಬಹುಪಾಲು ರೈತರು ಅತೀ ಸಣ್ಣ ಮತ್ತು ಸಣ್ಣ ಹಿಡುವಳಿದಾರರಾಗಿದ್ದು, ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಮತ್ತು ಸುತ್ತಮುತ್ತ ಲಕ್ಷಾಂತರ ಮರಗಿಡಗಳನ್ನು ಬೆಳೆಸಿದ್ದಾರೆ. ಇಂತಹ ಪ್ರದೇಶವನ್ನು ಟೌನ್‌ಶಿಪ್ ಯೋಜನೆಗೆ ಸ್ವಾಧೀನ ಪಡಿಸಿಕೊಂಡರೆ ಪರಿಸರಕ್ಕೆ ಅಪಾರ ಹಾನಿ ಉಂಟಾಗುತ್ತದೆ.

ಸಾವಿರಾರು ಕುಟುಂಬಗಳ ಜೀವನ ನಿರ್ವಹಣೆಗೆ ಧಕ್ಕೆ ಉಂಟಾಗಿ, ರೈತ ಕುಟುಂಬದ ಯುವಕರು ನಿರುದ್ಯೋಗಿಗಳಾಗಿ ಬೀದಿಪಾಲಾಗುತ್ತಾರೆ. ಈ ಬಡ ರೈತರ ಜೀವನೋಪಾಯಕ್ಕೆ ಕೃಷಿ ಭೂಮಿಯೇ ಆಧಾರವಾಗಿದೆ. ಇದಲ್ಲದೇ ಕರ್ನಾಟಕ ಹೌಸಿಂಗ್ ಬೋರ್ಡ್ ಹಾಗೂ ಇತರೆ ಸರ್ಕಾರಿ ಪ್ರಾಧಿಕಾರಗಳು ಬಿಡದಿಯ ಸುತ್ತಮುತ್ತಲೂ ಹಲವಾರು ವಸತಿ ಯೋಜನೆಗಳನ್ನು ರೂಪಿಸಿ, ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ.

ಬಡ ರೈತರ ಹಿತದೃಷ್ಠಿಯಿಂದ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಟೌನ್‌ಶಿಪ್ ಯೋಜನೆಗೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುತ್ತಿರುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here