ಸರ್ಕಾರಿ ಗೌರವಗಳೊಂದಿಗೆ ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ!

0
Spread the love

ನವದೆಹಲಿ:- ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಾ. ಮನಮೊಹನ್ ಸಿಂಗ್‌ ಏಮ್ಸ್​ ಆಸ್ಪತ್ರೆಯಲ್ಲಿ ಗುರುವಾರ ವಿಧಿವಶರಾಗಿದ್ದಾರೆ. ಅಪ್ರತಿಮ ನಾಯಕನನ್ನ ಕಳೆದುಕೊಂಡು ಇಡೀ ದೇಶವೇ ಕಂಬನಿ ಮಿಡಿಯುತ್ತಿದ್ದು, ಇಂದು ಭಾರತಾಂಭೆಯ ಹೆಮ್ಮೆಯ ಪುತ್ರ ಮನಮೋಹನ್​ ಸಿಂಗ್​ ಅವರ ಅಂತ್ಯಕ್ರಿಯೆ ನೆರವೇರಲಿದೆ.

Advertisement

ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬೆಳಗ್ಗೆ 11.45ಕ್ಕೆ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಈಗಾಗಲೇ ನಿಗಮಬೋಧ ಘಾಟ್‌ನಲ್ಲಿ ಮನಮೋಹನ್​ ಸಿಂಗ್​ರ ಅಂತ್ಯಕ್ರಿಯೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮನಮೋಹನ್​ ಸಿಂಗ್​ ನಿಧನಕ್ಕೆ ಇಡೀ ದೇಶವೇ ಕಂಬನಿ ಮುಡಿಯುತ್ತಿದ್ದು, ಗಣ್ಯಾತಿಗಣ್ಯರು ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here