ಮಹಾರಾಷ್ಟ್ರ: ಕೇಂದ್ರ ಮಾಜಿ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಅವರು ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮಹಾರಾಷ್ಟ್ರದ ಇಂದು ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.
ಪಾಟೀಲ್ ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದ ಬಳಲುತ್ತಿದ್ದರು. ಅವರಿಗೆ ಮನೆಯಲ್ಲೇ ಆರೈಕೆ ಮಾಡಲಾಗುತ್ತಿತ್ತು. ಆದರೆ ಇಂದು ಮುಂಜಾನೆ 6.30ರ ಸುಮಾರಿಗೆ ಅವರು ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ. ಸುದೀರ್ಘ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಲೋಕಸಭೆಯ ಸ್ಪೀಕರ್ ಹುದ್ದೆಯನ್ನೂ ಅಲಂಕರಿಸಿದ್ದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ವಿವಿಧ ಪ್ರಮುಖ ಖಾತೆಗಳನ್ನು ಒಳಗೊಂಡಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಲಾತೂರ್ ಲೋಕಸಭಾ ಕ್ಷೇತ್ರದಿಂದ ಏಳು ಬಾರಿ ಗೆದ್ದು ದಾಖಲೆ ನಿರ್ಮಿಸಿದ್ದರು.



