ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. KA 01 MZ 5843 ಬೂದು ಬಣ್ಣದ ಟೊಯೀಟಾ FORTUNER ಕಾರು ಕಳ್ಳರು ಮಂಕಿ ಕ್ಯಾಪ್ ಹಾಕಿಕೊಂಡು ಬಂದು, ಹಸುವೊಂದನ್ನು ಕಳ್ಳತನ ಮಾಡಿದ್ದಾರೆ.
Advertisement
ಹಸು ಕಳವು ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಸು ಕದ್ದ ವಿಷಯ ತಿಳಿದ ಕೂಡಲೇ ಸ್ಥಳೀಯರು ಕಾರನ್ನು ಅಡ್ಡ ಹಾಕಲು ಯತ್ನಿಸಿದ್ದಾರೆ. ಆದರೆ, ಕಳ್ಳರು ಸ್ಥಳೀಯರ ಮೇಲೆ ಕಾರು ಹತ್ತಿಸುವ ಯತ್ನಿಸಿದ್ದಾರೆ. ಘಟನೆ ಕುರಿತು ಸ್ಥಳೀಯರು ಸೊರಬ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.