ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಹುಲಕೋಟಿಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಸಹಯೋಗದಲ್ಲಿ ಕಾರ್ಮಿಕರ ಸಮುದಾಯ ಭವನ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಮಂಗಳವಾರ ಕಾರ್ಮಿಕ ಇಲಾಖೆಯ ಸಚಿವ ಸಂತೋಷ ಲಾಡ್ ಹಾಗೂ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರ ಉಪಸ್ಥಿತಿಯಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಕೃಷ್ಣ ಗೌಡ ಪಾಟೀಲ, ಗಣ್ಯರಾದ ಡಿ.ಆರ್. ಪಾಟೀಲ, ಸಿದ್ದು ಪಾಟೀಲ, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭಾರತಿ ಡಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಸೇರಿದಂತೆ ಪ್ರಮುಖರು, ಹಿರಿಯರು ಇದ್ದರು.