ಬೆಂಗಳೂರು: ಮೊದಲ ಬಾರಿಗೆ ಗಾಂಜಾ ಮಾರಾಟಕ್ಕೆ ಯತ್ನಿಸಿದ ನಾಲ್ವರು ಗೆಳೆಯರನ್ನು ಕೊಡಿಗೇಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಜಿತ್, ಕಾರ್ತಿಕ್, ಹಾಗೂ ಕಾರ್ತಿಕ್ ಮತ್ತು ರಾಕೇಶ್ ಬಂಧಿತ ಆರೋಪಿಗಳಾಗಿದ್ದು, ಯಲಹಂಕ ಭಾಗದವರಾಗಿದ್ದ ಆರೋಪಿಗಳು ಈ ಹಿಂದೆ ಕಳ್ಳತನ ಮಾಡುತ್ತಿದ್ದರು.
Advertisement
ಕಳ್ಳತನ ರಿಸ್ಕ್ ಅಂತ ಗಾಂಜಾ ಮಾರಾಟ ಮಾಡಲು ಪ್ಲಾನ್ ಮಾಡಿದ್ದರು. ಒರಿಸ್ಸಾದಿಂದ ಗಾಂಜಾ ತರಿಸಿಕೊಂಡು ಆಟೋ ರಿಕ್ಷಾದಲ್ಲಿ ಮಾರಾಟಕ್ಕೆ ಮುಂದಾದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 8 ಕೆಜಿ 600 ಗ್ರಾಂ ಗಾಂಜಾ ಹಾಗೂ ಆಟೋ ರಿಕ್ಷಾ ವಶಕ್ಕೆ ಪಡೆಯಲಾಗಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಸಿ ತನಿಖೆ ಮುಂದುವರೆಸಿದ್ದಾರೆ.