ಬೆಂಗಳೂರು: ಹೊಸ ವರ್ಷದ ಸಮೀಪದಲ್ಲಿ ಅಶೋಕ ನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಸಿನಿಮಾ ಮಾದರಿಯಲ್ಲಿ ಗಾಂಜಾ ಸಾಗಿಸುತ್ತಿದ್ದವರನ್ನು ಅರೆಸ್ಟ್ ಮಾಡಿದ್ದಾರೆ. ಶ್ರೀಕಾಂತ್, ಮುನಿರಾಜು, ಚಂದ್ರಕಾಂತ್, ಬಾಲಕೃಷ್ಣ ಬಂಧಿತ ಆರೋಪಿಗಳಾಗಿದ್ದು, ಬಲೋರೋ ಪಿಕ್ ಅಪ್ ವಾಹನದ ಹಿಂಬದಿಯಲ್ಲಿ ಬೇರೆಯದ್ದೆ ಬಾಡಿ ನಿರ್ಮಿಸಿ ಗಾಂಜಾ ಸಾಗಿಸುತ್ತಿದ್ದರು. ನೆರೆಯ ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಗಾಂಜಾ ಸಾಗಿಸುತ್ತಿದ್ರು.
Advertisement
ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೇರುಘಟ್ಟ ರಸ್ತೆಯ ಕ್ರಿಶ್ಚಿಯನ್ ಸ್ಮಶಾನದ ಪಕ್ಕ ವಾಹನ ನಿಲ್ಲಿಸಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 31 ಲಕ್ಷ ಮೌಲ್ಯದ 77 ಕೆಜಿ ಗಾಂಜಾ ಸೇರಿ ಬುಲೆರೋ ವಾಹನ, ಮೂರು ಮೊಬೈಲ್ ಸೀಜ್ ಮಾಡಲಾಗಿದ್ದು, ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.


