ಬೈಕ್-ಶಾಲಾ ಬಸ್ ನಡುವೆ ಭೀಕರ ಅಪಘಾತ: ನಾಲ್ವರು ಸಾವು

0
Spread the love

ಚಿಕ್ಕಬಳ್ಳಾಪುರ:- ಜಿಲ್ಲೆಯ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಬೈಕ್ ಹಾಗೂ ಶಾಲಾ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಟ್ಟು ನಾಲ್ವರು ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಮದುವೆಗೆಂದು ತಲಕಾಯಲಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಬೈಕ್​​ನಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತರನ್ನು ಬಾಲಾಜಿ, ವೆಂಕಟೇಶಪ್ಪ, ಹರೀಶ್, ಆರ್ಯ ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್, ಬೈಕ್‌ನಲ್ಲಿದ್ದ ಮತ್ತೊಂದು ಮಗು ಶಿವಾನಿ ಪಾರಾಗಿದ್ದಾಳೆ.

ಮದುವೆಯಲ್ಲಿ ಭಾಗಿಯಾಗಲು ಬೈಕ್‌ನಲ್ಲಿ ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದೆಡೆ ಎದುರುಗಡೆ ಬಂದ ಖಾಸಗಿ ಶಾಲಾ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಘಟನೆಯಲ್ಲಿ ಐವರ ಪೈಕಿ ನಾಲ್ವರು ಮೃತಪಟ್ಟಿದ್ದು, ಅದೃಷ್ಟವಶಾತ್ ಒಂದು ಮಗು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ


Spread the love

LEAVE A REPLY

Please enter your comment!
Please enter your name here