ಬೆಳಗಾವಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಮೂವರು ಸಾವನಪ್ಪಿದ್ದು, ಅದರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ನಗರದ ಜೋಷಿಮಾಳ್ ದಲ್ಲಿ ನಡೆದಿದೆ.
Advertisement
ಸಂತೋಷ ಕುರಡೇಕರ್ ( 44) , ಸುವರ್ಣ ಕುರಡೇಕರ್ , ಮಂಗಳಾ ಕುರಡೇಕರ್ ಮೃತ ದುರ್ಧೈವಿಗಳಾಗಿದ್ದು, ಸುನಂದಾ ಕುರಡೇಕರ್ ಸ್ಥಿತಿ ಚಿಂತಾ ಜನಕವಾಗಿದೆ. ತಾಯಿ, ಮಗ, ಮಗಳು ಸಾವಿಗೀಡಾದವರು. ಮತ್ತೊಬ್ಬ ಮಗಳು ಸುನಂದಾ ಕುರಡೇಕರ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ 9 ಗಂಟೆಗೆ ಕುಟುಂಬಸ್ಥರು ವಿಷ ಸೇವಿಸಿದ್ದಾರೆ. ಗಂಭೀರವಾಗಿರುವ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.