ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇವತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಆದರೆ, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಆಗಲಿದೆ, ನಾಳೆ ಬೆಂಗಳೂರಿನಲ್ಲಿ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.
ಜೊತೆಗೆ ನಾಳೆ ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ಯಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಹಾಸನ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಶಿವಮೊಗ್ಗ ಈ ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.