ಹಾಸನದಲ್ಲಿ ಇಂದು ಒಂದೇ ದಿನ ಹೃದಯಾಘಾತಕ್ಕೆ ನಾಲ್ವರು ಬಲಿ..! 40 ದಿನಗಳಲ್ಲಿ 22 ಜನರು ಸಾವು!

0
Spread the love

ಹಾಸನ: ಹಾಸನದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇಂದು ಒಂದೇ ದಿನ ನಾಲ್ವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಹೌದು ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

Advertisement

ಲೋಹಿತ್ (38) ಲೇಪಾಕ್ಷಿ (50), ಇಂಗ್ಲಿಷ್ ಪ್ರಾಧ್ಯಾಪಕ ಮುತ್ತಯ್ಯ (58), ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಹೃದಯಾಘಾತದಿಂದ ಮೃತಪಟ್ಟ ದುರ್ಧೈವಿಗಳಾಗಿದ್ದು,

ಲೋಹಿತ್ ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯಲ್ಲಿ ಊರಿಗೆ ಬಂದಿದ್ದ ಅವರು, ಜುಲೈ 3ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಮರಳುವವರಿದ್ದರು. ದುರದೃಷ್ಟವಶಾತ್, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಗ್ರಾಮದ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್​ಗೆ ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಇವರು ಚನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here