Home Karnataka News ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗಿ ಜೀವ ಕಳೆದುಕೊಂಡ ನಾಲ್ವರು!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗಿ ಜೀವ ಕಳೆದುಕೊಂಡ ನಾಲ್ವರು!

0
ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗಿ ಜೀವ ಕಳೆದುಕೊಂಡ ನಾಲ್ವರು!
Spread the love

ರಾಯಚೂರು: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರಂತವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಸಮೀಪ ನಡೆದಿದೆ.

ಮೃತರನ್ನು ಉಮಾವತಿ (35), ರತ್ನ (24), ಮಹೇಶ್ (28) ಮತ್ತು ಶಿವಾನಂದ (24) ಎಂದು ಗುರುತಿಸಲಾಗಿದೆ. ಇವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೋಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮಾಹಿತಿ ಪ್ರಕಾರ, ಕುಟುಂಬದವರು ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದ ಸಾತುನೂರು ಗ್ರಾಮದ ಬಳಿ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತಗ್ಗು ಪ್ರದೇಶದಲ್ಲಿ ಸಿಲುಕಿಕೊಂಡು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ರಾಯಚೂರು ಜಿಲ್ಲೆಯ ಕುರ್ಡಿ ಗ್ರಾಮದ ನಿವಾಸಿಗಳಾಗಿದ್ದು, ಘಟನೆ ಆಂಧ್ರಪ್ರದೇಶದ ಕೋಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here