ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಹಸುಗೂಸು ಸೇರಿ ನಾಲ್ವರು ಸಾವು!

0
Spread the love

ನವದೆಹಲಿ:- ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ದೆಹಲಿಯ ಮುಸ್ತಫಾಬಾದ್‌ ಪ್ರದೇಶದಲ್ಲಿ ಇಂದು ನಸುಕಿನ ಜಾವ ಜರುಗಿದೆ. ಘಟನೆಯಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ.

Advertisement

ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿದಾಗ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಅವರಲ್ಲಿ 18 ಮಂದಿಯನ್ನ ರಕ್ಷಿಸಲಾಗಿದ್ದು, ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ 14 ಮಂದಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಎನ್‌ಡಿಆರ್‌ಎಫ್‌, ಡಾಗ್ ಸ್ಕ್ವಾಡ್, ದೆಹಲಿ ಪೊಲೀಸರ ತಂಡಗಳು ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ 18 ಮಂದಿಯನ್ನ ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ.


Spread the love

LEAVE A REPLY

Please enter your comment!
Please enter your name here