ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ!

0
Spread the love

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್​ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಜರುಗಿದೆ.

Advertisement

ನಿಯಾಜ್(15), ಮೊಹಮ್ಮದ್ ಜಿಲಾಲ್(15), ಆಕಾಶ್(15) ಸೇರಿ ಇನ್ನೋರ್ವನ ರಕ್ಷಣೆಗೊಳಗಾದವರು. ಲೈಫ್​ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್​ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here