ಬೆಂಗಳೂರು: ಬೆಳಗಿನ ಜಾವ ನಿಶ್ಶಬ್ದವಾಗಿದ್ದ ರಸ್ತೆಯಲ್ಲಿ ಏಕಾಏಕಿ ಸರಣಿ ಅಪಘಾತ ಸಂಭವಿಸಿದೆ.

ನಿಂತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು, ಬಳಿಕ ಎರಡು ಬೈಕ್ಗಳಿಗೂ ಡಿಕ್ಕಿಯಾದ ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಹೆಬ್ಬಾಳದ ಭದ್ರಪ್ಪ ಲೇಔಟ್ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ನಿಂತಿದ್ದ ವ್ಯಾಗನ್ ಆರ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಾಗನ್ ಆರ್ ಕಾರು ಸಂಪೂರ್ಣ ಜಖಂಗೊಂಡಿದ್ದು, ಬಳಿಕ ಎರಡು ಬೈಕ್ಗಳಿಗೂ ಡಿಕ್ಕಿಯಾಗಿದೆ.
ಅಪಘಾತದಲ್ಲಿ ವ್ಯಾಗನ್ ಆರ್ ಕಾರಿನ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಕಾರಿನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಬೆಳಗಿನ ಜಾವ ಸಂಭವಿಸಿದ ಈ ಸರಣಿ ಅಪಘಾತದ ಕುರಿತು ಸಂಜಯ್ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದ್ದಾರೆ.









