ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾದ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ!

0
Spread the love

ಬೆಂಗಳೂರು:– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ ಭೇಟಿ ಮಾಡಿದ್ದಾರೆ.

Advertisement

ಐಫೋನ್ ಮತ್ತು ಅದರ ಬಿಡಿಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮತ್ತಷ್ಟು ಬಂಡವಾಳ ಹೂಡಿಕೆ ಮತ್ತಿತರ ಸಂಗತಿಗಳ ಬಗ್ಗೆ ಚರ್ಚಿಸಿದರು.

ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್‌.ಮುನಿಯಪ್ಪ ಕೂಡ ಇದ್ದರು. ವೂ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ‘ಫಾಕ್ಸ್‌ಕಾನ್‌ ಕಂಪನಿಯು ದೇವನಹಳ್ಳಿಯ ತನ್ನ ಘಟಕದಲ್ಲಿ ಕೈಗಾರಿಕಾ ಚಟುವಟಿಕೆ ಆರಂಭಿಸಿರುವುದು ಒಳ್ಳೆಯದು. ಇನ್ನೂ ಘಟಕದ ವಿಸ್ತರಣೆಗೆ ಅಗತ್ಯ ಇರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತೆ ಗುಂಜನ್‌ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಕೂಡ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here