ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ ಸೇರಿದಂತೆ ಹಲವು ಸಿನಿಮಾಗಳನ್ನ ನಿರ್ಮಾಣ ಮಾಡಿದ್ದ ಎಂ ಎನ್ ಕುಮಾರ್ ಅವರನ್ನು ವಿಜಯ ನಗರ ಪೋಲಿಸರು ಅರೆಸ್ಟ್ ಮಾಡಿದ್ದಾರೆ.
Advertisement
1.25 ಕೋಟಿ ರೂಪಾಯಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎನ್ ಕುಮಾರ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಖ್ಯಾತ ನಟ ಜಗ್ಗೇಶ್ ಅವರು ನಿರ್ಮಾಪಕ ಎಂಎನ್ ಸುರೇಶ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು ಎನ್ನಲಾಗುತ್ತಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಜಗ್ಗೇಶ್ ಅವರು ಎಂಎನ್ ಕುಮಾರ್ ಅವರ ಮೇಲೆ ಯಾವ ಕಾರಣಕ್ಕೆ ದೂರು ನೀಡಿದ್ದರು ಎಂಬುದು ಇನ್ನಷ್ಟೆ ತಿಳಿಯಬೇಕಿದೆ. ಎಂಎನ್ ಕುಮಾರ್ ಅವರು ಈ ಹಿಂದೆ ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿದ್ದರು.