ಬೆಂಗಳೂರು: ಕುಂಭಮೇಳದ ಪ್ರವಾಸದ ಹೆಸರಲ್ಲಿ ಅಮಾಯಕರಿಗೆ ಲಕ್ಷಾಂತರ ರೂ. ವಂಚನೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಗೋವಿಂದರಾಜನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
Advertisement
ಪಾಂಚಜನ್ಯ ಟೂರ್ಸ್ ಅಂಡ್ ಟ್ರಾವೆಲ್ಸ್ ಹೆಸರಲ್ಲಿ ಜಾಹೀರಾತು ನೀಡಿದ್ದ. ಜಾಹೀರಾತಿನಲ್ಲಿ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ ಟೂರ್ ಪ್ಯಾಕೇಜ್ ಬಗ್ಗೆ ತಿಳಿಸಿ 7 ದಿನಗಳ ಪ್ಯಾಕೇಜ್ಗೆ ತಲಾ 49,000 ರೂ. ಪಡೆದು ಜನರಿಗೆ ವಂಚಿಸಿದ್ದನು.
ರಾಘವೇಂದ್ರ ಸುಮಾರು ಇಪ್ಪತ್ತು ಜನರ ಬಳಿ ಹಣ ಪಡೆದು 70 ಲಕ್ಷ ರೂ. ವಂಚನೆ ಮಾಡಿದ್ದ. ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.