ಚಿತ್ರದುರ್ಗ:- ಚಿತ್ರದುರ್ಗದ ಸೆನ್ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಮುಂಬೈ ಪೊಲೀಸರೆಂದು ನಂಬಿಸಿ ಹಿರಿಯ ವೈದ್ಯರೊಬ್ಬರಿಂದ 1.27 ಕೋಟಿ ರೂ. ದೋಚಿದ್ದ ಸೈಬರ್ ವಂಚಕರನ್ನು ಬಂಧಿಸಿದ್ದಾರೆ. ಆಗಸ್ಟ್ 23 ರಂದು ವೈದ್ಯ ಶ್ರೀನಿವಾಸ್ ಶೆಟ್ಟಿಗೆ ವಾಟ್ಸಪ್ ಹಾಗೂ ನಾರ್ಮಲ್ ಕರೆ ಮಾಡಿದ್ದ ವಂಚಕರು,
ನಾವು ಟಿಆರ್‌ಎಐ & ಮುಂಬೈ ಪೊಲೀಸರೆಂದು ಹೇಳಿದ್ದು, ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ಅಲ್ಲದೇ ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿ ತಮ್ಮ ಖಾತೆಗೆ 1.27 ಕೋಟಿ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದರು.
ಇದರಿಂದಾಗಿ ಕಂಗಾಲಾದ ವೈದ್ಯ ಶ್ರೀನಿವಾಸ್ ಶೆಟ್ಟಿಯವರು ಆಗಸ್ಟ್ 26 ರಂದು ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ವಂಚಕರ ಜಾಡನ್ನು ಬೆನ್ನತ್ತಿದ್ದ ಪೊಲೀಸರು, ಅಸ್ಸಾಂ ಮೂಲದ ಆರೋಪಿ ಪವನ್ ಕುಮಾರ್, ಜಾಕೀರ್ ಬೋರಾ ಎಂಬ ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಂಚಿತರಿಂದ ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದ 16.89 ಲಕ್ಷ ರೂ. ಫ್ರೀಜ್ ಮಾಡಲಾಗಿದೆ.