HomeBengaluru Newsಆನ್ಲೈನ್ ಟ್ರೇಡಿಂಗ್ ನೆಪದಲ್ಲಿ ವಂಚನೆ: ನಾಲ್ವರನ್ನು ಅರೆಸ್ಟ್ ಮಾಡಿದ ಇಡಿ!

ಆನ್ಲೈನ್ ಟ್ರೇಡಿಂಗ್ ನೆಪದಲ್ಲಿ ವಂಚನೆ: ನಾಲ್ವರನ್ನು ಅರೆಸ್ಟ್ ಮಾಡಿದ ಇಡಿ!

For Dai;y Updates Join Our whatsapp Group

Spread the love

ಬೆಂಗಳೂರು:- ಇಡಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಆನ್​ಲೈನ್​​​ ಟ್ರೇಡಿಂಗ್​ ನೆಪದಲ್ಲಿ ಜನರಿಗೆ ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.

ಶಶಿಕುಮಾರ್, ಸಚಿನ್, ಕಿರಣ್, ಚರಣ್ ರಾಜ್ ಬಂಧಿತರು. ಸದ್ಯ ಬಂಧಿತ ಆರೋಪಿಗಳನ್ನು ಬೆಂಗಳೂರು ಇಡಿ ಕೋರ್ಟ್​ಗೆ ಹಾಜರು ಪಡಿಸಿದ್ದು ಆರೋಪಿಗಳನ್ನು 7 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿಗಳು ಆನ್​ಲೈನ್​​​ ಟ್ರೇಡಿಂಗ್​ ಹೆಸರಲ್ಲಿ ಜನರಿಂದ ಕೋಟ್ಯಂತರ ಹಣ ಪಡೆದು ವಂಚನೆ ಮಾಡುತ್ತಿದ್ದರು. ನಕಲಿ ಕಂಪನಿಗಳ ಹೆಸರಲ್ಲಿ ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ನಕಲಿ ದಾಖಲೆ ನೀಡಿ ಹತ್ತಾರು ಬ್ಯಾಂಕ್​​ಗಳಲ್ಲಿ ಅಕೌಂಟ್​ ತೆರೆದಿದ್ದರು. ಜನರಿಂದ ಹಣ ಪಡೆದ ಕೂಡಲೇ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ನಂತರ ಹಣ ಜಮಾ ಮಾಡಿದವರ ನಂಬರ್ ಬ್ಲಾಕ್ ಮಾಡ್ತಿದ್ರು.

ಈ ಬಗ್ಗೆ ಬೆಂಗಳೂರು ಸೈಬರ್ ಠಾಣೆಗಳಲ್ಲಿ ಹಲವು ದೂರು ದಾಖಲಾಗಿದ್ದವು. ವಿವಿಧ ಬ್ಯಾಂಕ್​ ಖಾತೆಗಳಿಂದ ಕೋಟ್ಯಂತರ ಹಣ ವರ್ಗಾವಣೆ ಹಿನ್ನೆಲೆ ಸೈಬರ್ ಕ್ರೈಂ ಪೊಲೀಸರು ಬೇನಾಮಿ ಹಣದ ಬಗ್ಗೆ ಇಡಿಗೆ ಮಾಹಿತಿ ನೀಡಿದ್ದರು. ಸದ್ಯ ಪ್ರಕರಣ ಸಂಬಂಧ ನಾಲ್ವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!